Wednesday, August 10, 2022

Latest Posts

ದಕ್ಷಿಣ ಕನ್ನಡ| ಶುಕ್ರವಾರ ನಾಲ್ವರು ಕೊರೋನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 17 ಮಂದಿಗೆ ಕೋವಿಡ್ -19 ದೃಢಪಟ್ಟಿದ್ದರೆ, ನಾಲ್ವರು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ.
ವೆನ್ಲಾಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  40 ಮತ್ತು 52 ವರ್ಷದ ಇಬ್ಬರು ಗಂಡಸರು, 42 ಮತ್ತು 59 ವರ್ಷದ ಇಬ್ಬರು ಮಹಿಳೆಯರು ಗುಣಮುಖಗೊಂಡು, ಬಿಡುಗಡೆಯಾಗಿದ್ದಾರೆ.
ವೆನ್ಲಾಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ 50 ವರ್ಷದ ಗಂಡಸು ರೋಗಿ ಸಂಖ್ಯೆ 3183 ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರ ದೊರೆತ 47 ಮಂದಿ ಪರೀಕ್ಷಾ ವರದಿಯಲ್ಲಿ 17 ಪಾಸಿಟಿವ್, 30 ನೆಗೆಟಿವ್ ಆಗಿದೆ. 188ಮಂದಿಯ ವರದಿ ನಿರೀಕ್ಷಿಸಲಾಗಿದೆ. 236 ಮಂದಿಯನ್ನು ಹೊಸದಾಗಿ ಪರೀಕ್ಷೆಗೆ ಒಳಪಡಿಸಲಾಗಿದೆ. ಉಸಿರಾಟದ ಸಮಸ್ಯೆಯ 27 ಪ್ರಕರಣ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 241 ಪಾಸಿಟಿವ್ ಪ್ರಕರಣ ದೃಢಗೊಂಡಿದೆ. ಈ ಪೈಕಿ 105 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಳು ಮಂದಿ ಮೃತಪಟ್ಟಿದ್ದಾರೆ. 129 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss