ದಿಗಂತ ವರದಿ ತುಮಕೂರು:
ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಗಳ ಬಂಡಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ 11 ಗಂಟೆ ಗೆ ದನದ ಕೊಟ್ಟಿಗೆಗೆ ಬೆಂಕಿ ಬಿದ್ದಿದ್ದು, ಮೂರು ಹಸುಗಳು ಸಜೀವವಾಗಿ ದಹನವಾಗಿವೆ.
ಬಂಡಿಹಳ್ಳಿಯ ಭದ್ರಯ್ಯ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಗೆ ಬೆಂಕಿ ಬಿದ್ದದ್ದನ್ನು ಗಮನಿಸಿದ ಭದ್ರಯ್ಯ ಹಸುಗಳನ್ನು ರಕ್ಷಿಸಲು ಪ್ರಯತ್ನಿಸಿ ಆತನೂ ಸಹ ಬೆಂಕಿ ಯಿಂದ ಗಾಯಗೊಂಡಿದ್ದಾರೆ. ಅವರನ್ನು ತುಮಕೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.