Wednesday, August 10, 2022

Latest Posts

ದಸರಾದ ಜಂಬೂಸವಾರಿ ಮೆರವಣಿಗೆಯಲ್ಲಿ 2 ಸಾವಿರ ಜನರು ಭಾಗವಹಿಸಲು ಅವಕಾಶ : ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಮಹಾಮಾರಿ ಕೊರೋನಾ ವೈರಾಣು ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾವನ್ನು ಸರಳ ಮತ್ತು ಸಾಂಪ್ರದಾಯಕವಾಗಿ ಆಚರಿಸಲು ಸರ್ಕಾರ ನಿರ್ಧರಿಸಿರುವ ಕಾರಣ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವುದಕ್ಕೆ ಕೇವಲ 2 ಸಾವಿರ ಜನಕ್ಕೆ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಭಾನುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಕಾರಣದಿಂದಾಗಿ ಸರಳ ದಸರಾ ಆಚರಣೆ ಮಾಡಲು ನಿರ್ಧರಿಸಿದ್ದೇವೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ ೨೫೦, ಅರಮನೆ ಸಾಂಸ್ಕöÈತಿಕ ಕಾರ್ಯಕ್ರಮಕ್ಕೆ 1 ಸಾವಿರ ಮಂದಿ, ಜಂಬೂಸವಾರಿಗೆ ೨ಸಾವಿರ ಜನ ಸೇರುವುದಕ್ಕೆ ಮಾತ್ರ ಅವಕಾಶ ನೀಡಲು ಚಿಂತನೆ ನಡೆಸಿದ್ದೇವೆ. ಈ ಬಗ್ಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಕೈ ಸೇರಿದ ನಂತರ ಈ ಬಗ್ಗೆ ಸ್ಪಷ್ಟ ತೀರ್ಮಾನ ಆಗಲಿದೆ ಎಂದು ಹೇಳಿದರು.

ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಕಲಾವಿದರಿಗೂ ಕೋವಿಡ್ ಟೆಸ್ಟ್ ಮಾಡಲಾಗುವುದು. ಐದು ದಿನ ಮುಂಚಿತವಾಗಿ ಟೆಸ್ಟ್ ಮಾಡಿಸಿಕೊಂಡ ಕಲಾವಿದರಿಗೆ ಮಾತ್ರ ಮೆರವಣಿಗೆಯಲ್ಲಿ ಭಾಗವಹಿಸುವುದಕ್ಕೆ ಅವಕಾಶ ನೀಡಲಾಗುವುದು ಎಂದರು.

ದಸರಾ ಪರಂಪರೆಯಾಗಿ ಮುಂದುರೆಸಿಕೊoಡು ಬಂದಿದೆ. ಹೀಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕಾಗುತ್ತೆ. ಈ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss