Thursday, August 11, 2022

Latest Posts

ದಾವಣಗೆರೆ| ಕಲ್ಲಿನ ಕ್ವಾರಿ ಹೊಂಡದಲ್ಲಿ ಮುಳುಗಿ ತಂದೆ, ಮಗ ಸಾವು

ದಾವಣಗೆರೆ: ಕಲ್ಲಿನ ಕ್ವಾರಿ ಹೊಂಡದಲ್ಲಿ ಮುಳುಗಿ ತಂದೆ, ಮಗ ಇಬ್ಬರೂ ಮೃತಪಟ್ಟ ಘಟನೆ ತಾಲೂಕಿನ ಮಾಯಕೊಂಡ ಸಮೀಪದ ಶಂಕರನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಕಿರಣ್ ಕುಮಾರ್(40), ಮಗ ಸೃಜನ್(16) ಮೃತಪಟ್ಟವರು. ಗ್ರಾಮದ ಹೊರವಲಯದ ಹೊಂಡದಲ್ಲಿ ಕೈ-ಕಾಲು ತೊಳೆದುಕೊಳ್ಳಲು ಹೋಗಿದ್ದಾಗ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಇದು ಕಲ್ಲು ಗಣಿಗಾರಿಕೆಯಿಂದ ಸೃಷ್ಟಿಯಾಗಿರುವ ಹೊಂಡವಾಗಿದ್ದು, ಈ ಹಿಂದೆ ಕೂಡ ಇಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಕೂಡಲೇ ಹೊಂಡ ಮುಚ್ಚುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss