Monday, August 15, 2022

Latest Posts

ದಾವಣಗೆರೆ| ಕಾರು-ಬೈಕ್ ಅಪಘಾತ: ಸವಾರ ಸಾವು!

ದಾವಣಗೆರೆ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ಸಂತೇಬೆನ್ನೂರು ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ.
ಚನ್ನಗಿರಿ ತಾಲೂಕು ಕಾಕನೂರು ಗ್ರಾಮದ ನವೀನ್(25 ವರ್ಷ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು ಗೊಬ್ಬರ ಚೀಲ ಇಟ್ಟುಕೊಂಡು ಊರಿನತ್ತ ಬೈಕ್‌ನಲ್ಲಿ ಸಾಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿದ್ದಾರೆ. ಚನ್ನಗಿರಿಯಿಂದ ಬರುತ್ತಿದ್ದ ಕಾರಿನಲ್ಲಿದ್ದ ಚಾಲಕ ಸೇರಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss