Thursday, July 7, 2022

Latest Posts

ದಾವಣಗೆರೆ ಜಿಲ್ಲೆಯಲ್ಲಿ ಬಾಷಾನಗರ ನರ್ಸ್ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್, ಮಹಿಳೆ ಬಂಧನ

ದಾವಣಗೆರೆ: ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟಕ್ಕೆ ಕಾರಣರಾಗಿದ್ದ ಬಾಷಾ ನಗರ ನರ್ಸ್(ಪಿ.533) ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ವಂದು ವಾಣಿ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ನರ್ಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮಂಜುಳಾ ರುದ್ರಯ್ಯ ಎಂಬುವರನ್ನು ದಸ್ತಗಿರಿ ಮಾಡಲಾಗಿದೆ. ಫೇಸ್‌ಬುಕ್‌ನಲ್ಲಿ ತಮ್ಮ ವಿರುದ್ಧ ಪೋಸ್ಟ್ ಹಾಕಿರುವ ಬಗ್ಗೆ ನರ್ಸ್ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದಾವಣಗೆರೆ ಸಿಇಎನ್ ಅಪರಾಧ ಠಾಣೆ ಪೊಲೀಸರು ಫೇಸ್‌ಬುಕ್ ಖಾತೆದಾರರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss