Friday, August 12, 2022

Latest Posts

ದಾವಣಗೆರೆ ಜಿಲ್ಲೆಯಲ್ಲಿ ಮತ್ತೆ 9 ಕೊರೋನಾ ಕೇಸ್ ಪತ್ತೆ: ಮೂವರು ಸೋಂಕಿತರು ಗುಣಾಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

ದಾವಣಗೆರೆ: ಜಿಲ್ಲೆಯಲ್ಲಿ ಗುರುವಾರ ಮತ್ತೆ 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 3 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಹೊಸ ಪ್ರಕರಣಗಳಲ್ಲಿ ಪಿ.4837 ಸಂಪರ್ಕದ 27 ವರ್ಷದ ಮಹಿಳೆ, 38 ವರ್ಷದ ಪುರುಷ, 38 ವರ್ಷದ ಮಹಿಳೆ, 42 ವರ್ಷದ ಪುರುಷ, 4 ವರ್ಷದ ಬಾಲಕ, ರಾಜಸ್ಥಾನದಿಂದ ಮರಳಿದ್ದ 18 ವರ್ಷದ ಯುವತಿ, 62 ವರ್ಷದ ವೃದ್ಧೆ, 66 ವರ್ಷದ ವೃದ್ಧ ಹಾಗೂ ತೀವ್ರ ಉಸಿರಾಟ ತೊಂದರೆ ಇದ್ದ 64 ವರ್ಷದ ವೃದ್ಧನಲ್ಲಿ ಸೋಂಕು ದೃಢಪಟ್ಟಿದೆ.
ಸಂಪೂರ್ಣ ಗುಣಮುಖರಾಗಿದ್ದ 73 ವರ್ಷದ ವೃದ್ಧೆ(ಪಿ.2417), 37 ವರ್ಷದ ಪುರುಷ(ಪಿ.4094), 35 ವರ್ಷದ ಮಹಿಳೆ(ಪಿ.4095) ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 223 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, 6 ಸಾವು ಸಂಭವಿಸಿವೆ. 168 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಪ್ರಸ್ತುತ 49 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss