ಮಂಗಳೂರು: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾದ ಬಂಟ್ವಾಳ ಫರಂಗಿಪೇಟೆಯ ಬಿಜೆಪಿ ಕಾರ್ಯಕರ್ತ ದಿನೇಶ್ ಕೊಟ್ಟಿಂಜ ಅವರ ಆರೋಗ್ಯ ವಿಚಾರಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ನಗರ ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಎಜೆ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದರು.
ಈ ಸಂದರ್ಭ ತಜ್ಞ ವೈದ್ಯರೊಂದಿಗೆ ಸಚಿವರು, ಶಾಸಕರು ಸಮಾಲೋಚನೆ ನಡೆಸಿ ದಿನೇಶ್ ಅವರ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ಶಾಸಕ ಡಾ.ಭರತ್ ಶೆಟ್ಟಿ ಅವರು ದಿನೇಶ್ ಅವರ ಆರೋಗ್ಯದ ಬಗ್ಗೆ ನಿರಂತರವಾಗಿ ವೈದ್ಯರೊಂದಿಗೆ, ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.
ಪ್ರಮುಖರಾದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ಬೊಳಿಯಾರ್, ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್ ಉಪಸ್ಥಿತರಿದ್ದರು.