Tuesday, August 16, 2022

Latest Posts

ದಿಮ್ಮಿಗಳನ್ನು ಹೊತ್ತ ಲಾರಿ ಪಲ್ಟಿ: ಚಾಲಕ ಅಪಾಯದಿಂದ ಪಾರು

ಬಂಟ್ವಾಳ: ಮರದ ದಿಮ್ಮಿಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಬಳಿಕ ರಸ್ತೆಯಿಂದ ಬದಿಗೆ ಉರುಳಿ ಬಿದ್ದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಮೆಲ್ಕಾರ್ ಸಮೀಪದ ಮಾರ್ನಬೈಲು ಜಂಕ್ಸ್ ನ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ.

ಘಟನೆಯಲ್ಲಿ ಯಾವುದೇ ಪ್ರಾಣ ಅಪಾಯ ಸಂಭವಿಸದೆ ಲಾರಿ ಮಾತ್ರ ಜಖಂ ಗೊಂಡಿದೆ, ಮೂರಕ್ಕೂ ಅಧಿಕ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿಬಿದ್ದಿದೆ. ವಿದ್ಯುತ್ ತಂತಿಗಳು ಕಡಿದುಹೋಗಿ ಅಪಾರ ನಷ್ಟ ಸಂಭವಿಸಿದೆ. ಮೆಲ್ಕಾರ್ ನಿಂದ ಬೃಹತ್ ಗಾತ್ರದ ಮರಗಳನ್ನು ತುಂಬಿಸಿಕೊಂಡು ಹೋಗುವ ವೇಳೆ ಸುಮಾರು 5.30ರ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮಾರ್ನಬೈಲು ಎಂಬಲ್ಲಿ ಮಗುಚಿ ಬಿದ್ದಿದೆ.
ಚಾಲಕನ ನಿಯಂತ್ರಣ ತಪ್ಪಿದ ಲಾರಿ ನೇರವಾಗಿ ರಸ್ತೆ ಬದಿಯಲ್ಲಿ ದ್ದ ವಿದ್ಯುತ್ ಕಂಬಗಳಿಗೆ ಡಿಕ್ಕಿಹೊಡೆದಿದೆ.

ಮೂರಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದು ವಿದ್ಯುತ್ ತಂತಿಗಳು ಕಡಿದು ನೆಲಕ್ಕುರುಳಿದೆ. ಈ ಭಾಗದ ಜನರಿಗೆ ವಿದ್ಯುತ್ ಕಡಿತಗೊಂಡಿದೆ. ಮೆಸ್ಕಾಂ ಇಲಾಖೆಯವರು ವಿದ್ಯುತ್ ಕಂಬಗಳನ್ನು ಹಾಕಿದ ಬಳಿಕವೇ ಈ ಭಾಗದ ಜನರಿಗೆ ವಿದ್ಯುತ್. ಲಾರಿ ಮಗುಚಿ ಬಿದ್ದ ವೇಳೆ ಲಾರಿ ಚಾಲಕ ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಎಸ್. ಐ.ರಾಜೇಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss