Thursday, July 7, 2022

Latest Posts

ದಿಲ್ಲಿ ಪೊಲೀಸರಿಗೆ ಮಹಿಳಾ ಆಯೋಗದಿಂದ ಸಮನ್ಸ್

ಹೊಸದಿಲ್ಲಿ: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಿಲ್ಲಿಯ ಮಹಿಳಾ ಆಯೋಗ ಪೊಲೀಸರಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ.

ಭಾನುವಾರ ಸಂಜೆ ಮಾಸ್ಕ್ ಧರಿಸಿ ಬಂದಿದ್ದ ಕಿಡಿಗೇಡಿಗಳು ಜೆಎನ್ ಯು ಕ್ಯಾಂಪಸ್ ಗೆ ನುಗ್ಗಿ ವಿದ್ಯಾರ್ಥಿ ಹಾಗೂ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದ ಸಂಬಂಧಿಸಿದಂತೆ ದಿಲ್ಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ದಿಲ್ಲಿ ಪೊಲೀಸರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಕ್ಯಾಂಪಸ್ ಗೆ ನುಗ್ಗಿ ದುಷ್ಕರ್ಮಿಗಳು ನಡೆಸಿದ ಹಲ್ಲೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss