Saturday, June 25, 2022

Latest Posts

ದಿ. ಸುರೇಶ್ ಅಂಗಡಿ ನಿವಾಸಕ್ಕೆ ಅಮಿತ್ ಶಾ ಭೇಟಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರದ ಮಾಜಿ ಸಚಿವ ದಿ. ಸುರೇಶ್ ಅಂಗಡಿ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಬೆಳಗಾವಿ ವಿಶ್ವೇಶ್ವರಯ್ಯ ನಗರದಲ್ಲಿರುವ ದಿ. ಸುರೇಶ್ ಅಂಗಡಿ ನಿವಾಸಕ್ಕೆ ಸಿಎಂ ಹಾಗೂ ಬಿಜೆಪಿ ನಾಯಕರೊಂದಿಗೆ ತೆರಳಿದ ಅಮಿತ್ ಶಾ ಅಂಗಡಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಮತ್ತು ಪುತ್ರಿಯರಾದ ಸ್ಪೂರ್ತಿ, ಶ್ರದ್ಧಾ ಅವರೊಂದಿಗೆ ಅಮಿತ್ ಶಾ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೊದಲಾದವರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss