Sunday, July 3, 2022

Latest Posts

“ದುರಾದೃಷ್ಟ ಡಿ.ಕೆ ರವಿಯಿಂದ ಡಿಕೆಶಿಯವರಿಗೆ ವರ್ಗಾವಣೆಯಾಗಿದೆ” ಎಂದ ಪ್ರಶಾಂತ ಸಂಬರಗಿಗೆ ತಿರುಗೇಟು ನೀಡಿದ ಡಿಕೆ ರವಿ ಪತ್ನಿ ಕುಸುಮಾ

ಬೆಂಗಳೂರು: ತಮ್ಮ ಬಗ್ಗೆ ಅವಮಾನಕರವಾಗಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ ಸಂಬರಗಿ ವಿರುದ್ಧ ಕುಸುಮಾ ಹನುಮಂತರಾಯಪ್ಪ ಫೇಸ್ ಬುಕ್ ಮೂಲಕವೇ ತಿರುಗೇಟು ನೀಡಿದ್ದಾರೆ.

ಸೋಮವಾರ ಡಿ ಕೆ ಶಿವಕುಮಾರ್ ಮನೆಗೆ ಸಿಸಿಬಿ ದಾಳಿ ನಡೆದ ನಂತರ   ಕುಸುಮಾ ಕಾಂಗ್ರೆಸ್​ ಸೇರ್ಪಡೆಗೊಳ್ಳುತ್ತಿರುವ ಫೋಟೋ ಹಾಕಿ “ಕುಸುಮಾರ ದುರಾದೃಷ್ಟ ಡಿ ಕೆ ರವಿಯಿಂದ ಡಿ ಕೆ ಶಿವಕುಮಾರ್ ಗೆ ವರ್ಗಾವಣೆಯಾಗಿದೆ” ಕುಸುಮಾ ಜಿಂದಾಬಾದ್​ ಎಂದು ಪ್ರಶಾಂತ ಸಂಬರಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು.

ಕುಸುಮಾ ಅವರು ಪ್ರಶಾಂತ ಸಂಬರಗಿ ಅವರಿಗೆ ಫೇಸ್ ಬುಕ್ ಮೂಲಕವೇ ತಿರುಗೇಟು ನೀಡಿದ್ದಾರೆ. ಸಹೋದರ ಪ್ರಶಾಂತ್ ಸಂಬರಗಿಯವರಿಗೆ ಎಂದು ಮಾತು ಆರಂಭಿಸಿ, ವೈಯುಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ, ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಸಾಮಾಜಿಕ ಪಿಡುಗುಗಳ ವಿರುದ್ದ ನಡೆಸುತ್ತಿರುವ ಹೋರಾಟ ಪ್ರಶಂಸನೀಯ. ಯುವಸಮೂಹಕ್ಕೆ ಡ್ರಗ್ಸ್ ವಿರುದ್ಧವಾಗಿ ಜಾಗ್ರತೆ ಮೂಡಿಸುತ್ತಿರುವ ನಿಮಗೆ ಅಭಿನಂದನೆಗಳು ಎಂದಿದ್ದಾರೆ.

ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ(Luck) ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ. ಪ್ರತಿಯೊಬ್ಬರ ಬದುಕಿನಲ್ಲೂ ಏಳು-ಬೀಳುಗಳಿರುತ್ತವೆ, ಇದೇ ರೀತಿ ನಿಮ್ಮ ಮನೆಯಲ್ಲೇ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ? ಎಂದು ಪ್ರಶ್ನಿಸಿದ್ದಾರೆ.

ಹೆಣ್ಣು‌ ಎಂಬ ಮಾತ್ರಕ್ಕೆ ಇಂತಹ ವಿಡಂಬನೆ ಮತ್ತು ಅಪಪ್ರಚಾರಗಳಿಗೆ ಒಳಗಾಗಬೇಕೆ? ಬೇರೆಯವರ ಮನೆಯ ಹೆಣ್ಣುಮಗಳ luck ಯಾವುದು ಎಂದು ಹುಡುಕುವ ಶಕ್ತಿ ಇರುವ ನಿಮಗೆ ಹತ್ರಾಸ್ ನ ಮನೀಷಾ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇಕೆ? ಎಂದು ಕೇಳಿದ್ದಾರೆ.

ಸಹೋದರ ಪ್ರಶಾಂತ್ ಸಂಬರಗಿ ಅವರೇ, ಇದರಿಂದ ಹೆಣ್ಣುಮಕ್ಕಳ ಕುರಿತ ನಿಮ್ಮ ಬುದ್ದಿಮಟ್ಟ ತಿಳಿಯುತ್ತದೆ. ಈ ಆಲೋಚನೆಗಳನ್ನು ಮುಂದುವರಿಸಿ. ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಪೋಸ್ಟ್ ಹಾಕುವ ಮೂಲಕ ತಿರುಗೇಟು ನೀಡಿದ್ದಾರೆ.

https://www.facebook.com/kusumaforRRnagar/photos/a.109614230913146/114011517140084/?type=3

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss