spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೆಹಲಿಯಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಕೇಂದ್ರದಿಂದ ಬರಲಿದೆ 500 ರೈಲ್ವೆ ಕೋಚ್: ಅಮಿತ್‌ ಶಾ

- Advertisement -Nitte

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಜೊತೆ ಭಾನುವಾರ ಸಭೆ ನಡೆಸಿದರು.
ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌, ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬಾಲಾಜಿ ಇದ್ದರು.
ಕೇಂದ್ರದಿಂದ ಕೂಡಲೇ 500 ರೈಲ್ವೆ ಕೋಚ್‌
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾ, ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ದೆಹಲಿಯಲ್ಲಿ ಬೆಡ್‌ಗಳ ಕೊರತೆ ಉಂಟಾಗಿದ್ದು, ಇದನ್ನು ನೀಗಿಸಲು ಕೇಂದ್ರದಿಂದ ಕೂಡಲೇ 500 ರೈಲ್ವೆ ಕೋಚ್‌ಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ದೆಹಲಿಯಲ್ಲಿ ಕೊರೊನಾ ನಿಯಂತ್ರಿಸಲು ಬದ್ಧವಾಗಿದ್ದು ಈ ಸಭೆಯಲ್ಲಿ ದೆಹಲಿ ಜನರ ಅರೋಗ್ಯ ಕುರಿತಂತೆ ಅನೇಕ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಮುಂದಿನ ಎರಡು ದಿನದಲ್ಲಿ ದೆಹಲಿಯಲ್ಲಿ ಕೊರೊನಾ ಪರೀಕ್ಷೆ ದ್ವಿಗುಣ ಹಾಗೂ ಆರು ದಿನಗಳಲ್ಲಿ ತ್ರಿಗುಣಗೊಳಿಸಲಾಗುವುದು. ದೆಹಲಿಯ ಸಣ್ಣ ಆಸ್ಪತ್ರೆಗಳಿಗೆ ಕೊರೊನಾ ವೈರಸ್‌ ಬಗ್ಗೆ ಸೂಕ್ತ ಮಾಹಿತಿ ಹಾಗೂ ಮಾರ್ಗಸೂಚಿ ನೀಡಲು ಸರ್ಕಾರ ಏಮ್ಸ್‌ನ ಹಿರಿಯ ವೈದ್ಯರ ಸಮಿತಿಯೊಂದನ್ನು ರಚಿಸಿ, ಟೆಲಿಫೋನಿಕ್‌ ಸಲಹೆಗಳನ್ನು ನೀಡಲಿದೆ. ಇದರ ಸಹಾಯವಾಣಿ ಸಂಖ್ಯೆ ಸೋಮವಾರ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.
ಸಭೆ ಯಶಸ್ವಿಯಾಗಿದೆ: ಕೇಜ್ರಿವಾಲ್‌ ಟ್ವೀಟ್‌ 
ಕೇಂದ್ರ ಸರಕಾರ ಹಾಗೂ ದೆಹಲಿ ಸರಕಾರದ ಜೊತೆಗಿನ ಸಭೆ ಯಶಸ್ವಿಯಾಗಿದೆ. ಬಹಳಷ್ಟು ಅನೇಕ ಪ್ರಮುಖ ನಿರ್ಧಾರಗಳನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ನಾವು ಒಟ್ಟಾಗಿ ಕೊರೊನಾ ವಿರುದ್ಧ ಹೋರಾಡುತ್ತೇವೆ ಎಂದು ಸಭೆ ಬಗ್ಗೆ ಮುಖ್ಯಮಂ‌ತ್ರಿ ಅರವಿಂದ್‌ ಕೇಜ್ರಿವಾಲ್‌ ಟ್ವೀಟ್‌ ಮೂಲಕ ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss