ನವದೆಹಲಿ: ದೆಹಲಿಯಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಾಳೆ ಬೆಳಿಗ್ಗೆ 11 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ಪರಿಸ್ಥಿತಿಯ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಗೃಹ ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.
ಸಭೆಯಲ್ಲಿ ದೆಹಲಿಯ ಏಮ್ಸ್ ಮತ್ತು ಇತರ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.