ವಾಯು ಮಾಲಿನ್ಯ: ದೆಹಲಿಯಲ್ಲಿ 10, 12ನೇ ತರಗತಿ ಮುಚ್ಚಲು ಸುಪ್ರೀಂ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿರುವ ಕಾರಣ ಸರ್ಕಾರ ಈಗಾಗಲೇ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಸ್ಥಗಿತಗೊಳಿಸಿದೆ. ಇದೀಗ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಎನ್‌ಸಿಆರ್ ಪ್ರದೇಶದಲ್ಲಿ ವಾಯುಮಾಲಿನ್ಯವನ್ನು ತಡೆಯಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳನ್ನು ಅಮಾನತುಗೊಳಿಸಬೇಕು. 10 ಮತ್ತು 12 ನೇ ವಿದ್ಯಾರ್ಥಿಗಳ ಶ್ವಾಸಕೋಶವು ಇತರ ವಿದ್ಯಾರ್ಥಿಗಳಿಗಿಂತ ಭಿನ್ನವಾಗಿರಲು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಎಲ್ಲಾ ತರಗತಿಗಳನ್ನು ನಿಲ್ಲಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ಆನ್‌ಲೈನ್‌ ತರಗತಿಗಳನ್ನು ನಡೆಸಬೇಕು ಎಂದು ಕೋರ್ಟ್‌ ನಿರ್ದೇಶನ ನೀಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ ಅಡಿಯಲ್ಲಿ ಮಾಲಿನ್ಯ-ವಿರೋಧಿ ನಿರ್ಬಂಧಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ನ್ಯಾಯಾಲಯವು ದೆಹಲಿ ಸರ್ಕಾರ ಮತ್ತು ವಾಯು ಗುಣಮಟ್ಟ ನಿರ್ವಹಣಾ ಆಯೋಗವನ್ನು (CAQM) ತರಾಟೆಗೆ ತೆಗೆದುಕೊಂಡಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!