ಹೊಸದಿಲ್ಲಿ: ಪೌರತ್ವ ಕಾಯ್ದೆ ವಿರೋಧಿ ಗಲಭೆ ಪ್ರಕರಣದಲ್ಲಿ ಕಾನೂನು ಬಾಹಿರ ಚಟುವಟಿಕೆ (ತಡೆ) ಕಾಯ್ದೆಯಡಿ ಬಂಧಿತನಾಗಿದ್ದ ಜೆಎನ್ಯುನ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ನನ್ನು ಅಕ್ಟೋಬರ್ 22ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿ ಕೋರ್ಟ್ ಆದೇಶ ನೀಡಿದೆ.
ಉಮರ್ ಖಾಲಿದ್ನ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಆತನನ್ನು ಇಂದು ಹೆಚ್ಚುವರಿ ಸೆಷನ್ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿರುವ ಕೋರ್ಟ್, ಅ.22 ವರೆಗೆ ಖಾಲಿದ್ನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.ಫೆಬ್ರವರಿ 24ರಂದು ಈಶಾನ್ಯ ದೆಹಲಿಯಲ್ಲಿ ನಡೆದ ಸಿಎಎ ಪರ-ವಿರೋಧಿ ಪ್ರತಿಭಟನೆ ಹಿಂಸಾರೂಪ ಪಡೆದಿತ್ತು. ಈ ಸಂಬಂಧ ಸೆ.13 ರಂದು ಉಮರ್ ಖಾಲಿದ್ನನ್ನು ಪೊಲೀಸರು ಬಂಧಿಸಿದ್ದರು.