ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ಸರಕಾರದ ನೂತನ ಕೃಷಿ ಕಾನೂನು ವಿರೋಧಿಸಿ ರೈತರು ರಾಜಧಾನಿ ನವದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ ಕೂಡ ಮುಂದುವರೆದಿದ್ದು, ಪ್ರತಿಭಟನೆ ವೇಳೆ ಓರ್ವ ರೈತ ಮೃತಪಟ್ಟಿದ್ದಾರೆ.
ಟ್ರಾಲಿಯೊಂದು ರೈತರಿದ್ದ ಟ್ರಾಕ್ಟರ್ ಗೆ ಗುದ್ದಿದ ಪರಿಣಾಮ 45 ವರ್ಷದ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಾಯವಾಗಿದೆ. ಸರ್ಕಾರವೇ ರೈತನ ಸಾವಿಗೆ ಸರ್ಕಾರವೇ ಕಾರಣ. ಸರ್ಕಾರ ಕಾನೂನು ಮೀರಿ ವರ್ತಿಸುತ್ತಿದೆ. ಎಲ್ಲೆಡೆ ಸಂಚಾರ ನಿರ್ಬಂಧ ಹೇರಲಾಗಿದೆ. ಎಂದು ಭಾರತೀಯ ಕಿಸಾನ್ ಯೂನಿಯನ್ ಆರೋಪಿಸಿದೆ.
ರೈತರು ದೆಹಲಿ-ಹರಿಯಾಣ ಹೆದ್ದಾರಿಯಲ್ಲಿ ಬರುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ದೆಹಲಿಯವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ದೆಹಲಿ ಸಮೀಪ ಇರುವ ರಾಜ್ಯಗಳಾದ ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ರಾಜಸ್ತಾನದಿಂದ ರೈತರು ಟ್ರ್ಯಾಕ್ಟರ್ ಮೂಲಕ ಆಗಮಿಸುತ್ತಿದ್ದರು.