ರಂಗೇರಿದ ರಾಷ್ಟ್ರ ರಾಜಧಾನಿಯ ಚುನಾವಣಾ ಕಣ: ಕಾಂಗ್ರೆಸ್ ನಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

0
212

ಹೊಸದಿಲ್ಲಿ: ದೆಹಲಿ ಚುನಾವಣೆಯಲ್ಲಿ ಗೆಲ್ಲಲ್ಲು ಬಿಜೆಪಿ, ಆಮ್ ಆದ್ಮಿಯಂತೆ ಕಾಂಗ್ರೆಸ್ ಕೂಡ ಹಲವು ಕಸರತ್ತುಗಳನ್ನು ನಡೆಸುತ್ತಿದ್ದು, ಇಂದು ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಗೊಳಿಸಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಒಟ್ಟು 40 ಮಂದಿ ಸ್ಟಾರ್ ಪ್ರಚಾರಕರು ಈ ಪಟ್ಟಿಯಲ್ಲಿದ್ದಾರೆ.

ಸಕ್ರಿಯ ರಾಜಕಾರಣದಿಂದಲೇ ದೂರ ಉಳಿದುಕೊಂಡಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು, ಕಾಂಗ್ರೆಸ್ ಆಡಳಿತವಿರುವ ಪಂಜಾಬ್​​ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್,  ಛತ್ತೀಸ್​​ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ಟಾರ್ ಪ್ರಚಾರಕರಾಗಿದ್ದಾರೆ.

ಸಂಸದ ಶಶಿ ತರೂರ್, ಮಾಜಿ ರಾಷ್ಟ್ರಪತಿ ಪ್ರಣಬ್ ಮುರ್ಜಿ ಪುತ್ರಿ ಶರ್ಮಿಷ್ಟ ಮುಖರ್ಜಿ, ಸಚಿನ್ ಪೈಲಟ್, ಜ್ಯೋತಿರಾದಿತ್ಯ ಸಿಂಧ್ಯಾ, ರಣದೀಪ್ ಸುರ್ಜೇವಾಲಾ, ಸಿನಿಮಾ ಕಲಾವಿದರಾದ ರಾಜ್ ಬಬ್ಬರ್, ಶತೃಘ್ನ ಸಿನ್ಹಾ, ಖುಷ್ಬು ಸುಂದರ್ ಮತ್ತು ನಗ್ಮಾ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದೆ.

LEAVE A REPLY

Please enter your comment!
Please enter your name here