Tuesday, June 28, 2022

Latest Posts

ದೆಹಲಿ ಹಿಂಸಾಚಾರ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಜ.26ರ ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಇಕ್ಬಾಲ್ ಸಿಂಗ್ ನನ್ನು ದೆಹಲಿ ಪೊಲೀಸ್ ವಿಶೇಷ ದಳ ಬಂಧಿಸಿದೆ.
ತಡರಾತ್ರಿ ಪೊಲೀಸರ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಪಂಜಾಬ್ ನ ಹೋಶಿಯಾರ್ ಪುರದಲ್ಲಿ ತಲೆ ಮರಿಸಿಕೊಂಡಿದ್ದ ಇಕ್ಬಾಲ್ ನನ್ನು ಬಂಧಿಸಲಾಗಿದೆ.
ದೆಹಲಿ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಅನೇಕರನ್ನು ಪೊಲೀಸರು ಬಂಧಿಸಿದ್ದು, ಮೂವರು ಮುಖ್ಯ ಆರೋಪಿಗಳ ಸುಳಿವು ನೀಡುವವರಿಗೆ 50 ಸಾವಿರ ರೂ. ನಗದು ಬಹುಮಾನ ನೀಡುವುದುದಾಗಿ ಘೋಷಿಸಿದ್ದರು.
ದೆಹಲಿಯ ಕೆಂಪುಕೋಟೆಗೆ ಮುತ್ತಿಗೆ ಹಾಕಲು ಪ್ರೇರೇಪಿಸಿದ ಆರೋಪದ ಮೇಲೆ ಪಂಜಾಬಿ ನಟ ದೀಪ್ ಸಿಧುವನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss