Tuesday, July 5, 2022

Latest Posts

ದೆಹಲಿ ಹಿಂಸಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಗಣರಾಜ್ಯೋತ್ಸವದ ದಿನದಂದು ದೆಹಲಿಯ ಬುರಾವಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುಖ್ಮೀತ್ ಸಿಂಗ್(35), ಗುಣ್ದೀಪ್ ಸಿಂಗ್ (33) ಮತ್ತು ಹರ್ವೀಂದರ ಸಿಂಗ್ (32) ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.

ಜ.26ರಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರ ರೂಪ ತಾಳಿದ್ದು, 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss