Thursday, June 30, 2022

Latest Posts

ದೆಹಲಿ ಹಿಂಸಾಚಾರ ವಿಚಾರಣೆ ನಡೆಸುತ್ತಿದ್ದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಎಸ್. ಮುರಳೀಧರ್ ವರ್ಗಾವಣೆ

ಹೊಸದಿಲ್ಲಿ: ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾದ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ದೆಹಲಿ ಹೈಕೋರ್ಟ್ ನ ನ್ಯಾಯಧೀಶರಾದ ಮುರಳೀಧರ್ ಅವರನ್ನು ಪಂಜಾಬ್ ಹೈಕೋರ್ಟ್ ಗೆ ವರ್ಗಾಯಿಸಲಾಗಿದೆ.

ಫೆ.12 ರಂದು ಎಸ್. ಮುರಳೀಧರ್ ಅವರ ವರ್ಗಾವಣೆಯನ್ನು ಸುಪ್ರೀಂ ಕೋರ್ಟ್ ನ ಉನ್ನತ ನ್ಯಾಯಾಲಯದ ಕೊಲೆಜಿಯಂ ಶಿಫಾರಸ್ಸು ಮಾಡಿತ್ತು, ಆದ್ದರಿಂದ ರಾಷ್ಟ್ರಪತಿ ರಾಮನಾಥ ಕೋವಿಂದ್, ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ ಬೊಬ್ಡೆ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ದೆಹಲಿ ಹೈಕೋರ್ಟ್ ನ ನ್ಯಾಯಧೀಶ ಎಸ್. ಮುರಳೀಧರ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗೆ ವರ್ಗಾಯಿಸಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ದೆಹಲಿ ಹೈ ಕೋರ್ಟ್ ಬಾರ್ ಅಸೋಸಿಯೇಷನ್ ಉತ್ತಮ ಮತ್ತು ದಿಟ್ಟ ನ್ಯಾಯಾಧೀಶರ ವರ್ಗಾವಣೆಯನ್ನು ವಿರೋಧಿಸಿತ್ತು. ಆದರೆ ಫೆ.12 ರಂದು ನಡೆದ ಸಭೆಯಲ್ಲಿ ಉನ್ನತ ನ್ಯಾಯಾಲಯದ ಕೊಲೆಜಿಯಂ ಅನುಭವ ಹಾಗೂ ದಿಟ್ಟ ತೀರ್ಪು ನೀಡುವ ನ್ಯಾಯಮೂರ್ತಿ ಮುರಳೀಧರ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗೆ ವರ್ಗಾಯಿಸಲು ಶಿಫಾರಸ್ಸು ಮಾಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss