ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೆಹಲಿ| 15 ಸಾವಿರ ಕೊರೋನಾ ರೋಗಿಗಳಿಗೆ ಮನೆಯಲ್ಲಿ ಪ್ರತ್ಯೇಕಿಸಿ ಚಿಕಿತ್ಸೆ: ಅರವಿಂದ ಕೇಜ್ರಿವಾಲ್

ಹೊಸದಿಲ್ಲಿ: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ನಡುವಣ ಸರ್ಕಾರ 15 ಸಾವಿರ ಕೊರೋನಾ ಸೋಂಕಿತರಿಗೆ ಮನೆಯಲ್ಲಿ ಚಿಕಿತ್ಸೆ ನೀಡುತ್ತಿದೆ.

ರಾಜ್ಯದಲ್ಲಿನ 25 ಸಾವಿರ ಸಕ್ರಿಯ ಸೋಂಕಿತರಲ್ಲಿ 15 ಸಾವಿರ ಕೋವಿಡ್-19 ರೋಗಿಗಳನ್ನು ಮನೆಯಲ್ಲಿ ಚಿಕಿತ್ಸೆ ನೀಡುವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಈವರೆಗೂ ಸೋಂಕಿನಿಂದ ಮೃತಪಡುತ್ತಿರುವರ ಸಂಖ್ಯೆಯ ದರ ಇಳಿಮುಖವಾಗುತ್ತಿದ್ದು, ನಾವು ಸಂಖ್ಯೆಯನ್ನು ಇನ್ನಷ್ಟು ಕಡಿಮೆ ಮಾಡಬೇಕು ಎಂದರು. ಇದರಿಂದ ಆಸ್ಪತ್ರೆಗಳಲ್ಲಿ ಕೊರೋನ ರೋಗಿಗಳ ಸಂಖ್ಯೆ 6,200 ರಿಂದ 5,100ಕ್ಕೆ ಇಳಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 15,000 ಕೊರೋನಾ ರೋಗಿಗಳ ಹಾಸಿಗೆಗಳು ಲಭ್ಯವಿದ್ದು, ಇದರಲ್ಲಿ ಇದೀಗ 5,100 ಹಾಸಿಗೆಗಳಲ್ಲಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 99,444ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 3,067 ಮಂದಿ ಸೋಂಕಿನಿಂದ ಬಲಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss