Tuesday, June 28, 2022

Latest Posts

ದೇಶಕ್ಕಾಗಿ ಅಂಬೇಡ್ಕರ್ ಕಂಡ ಕನಸು ನನಸು ಮಾಡಲು ನಾವೆಲ್ಲರೂ ಬದ್ಧರಾಗಿದ್ದೇವೆ: ಪ್ರಧಾನಿ ಮೋದಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂದು ಭಾರತದ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೆಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ. ಈ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ದೇಶದ ಗಣ್ಯರು ಅವರನ್ನು ಸ್ಮರಿಸಿ ಗೌರವ ಸಲ್ಲಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಟ್ವೀಟ್ ಮಾಡಿದ್ದು, ಮಹಾಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕರ್ ಅವರನ್ನು ನೆನೆಸಿಕೊಂಡಿದ್ದಾರೆ. ಅಂಬೇಡ್ಕರ್ ಅವರ ಆಲೋಚನೆ. ಐಡಿಯಾಗಳು ದೇಶದ ಲಕ್ಷಾಂತರ ಜನರಿಗೆ ಶಕ್ತಿ ನೀಡುತ್ತದೆ. ಅವರು ದೇಶಕ್ಕಾಗಿ ಕಂಡಿರುವ ಕನಸುಗಳನ್ನು ನನಸು ಮಾಡಲು ನಾವೆಲ್ಲರೂ ಬದ್ಧರಾಗಿದ್ದೇವೆ ಎಂದಿದ್ದಾರೆ.

ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡಿದ್ದು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭವಿಷ್ಯದ ಸರ್ವಾಂಗೀಣ ಸಂವಿಧಾನವನ್ನು ರಚನೆ ಮಾಡುವ ಮೂಲಕ ದೇಶದಲ್ಲಿ ಪ್ರಗತಿ, ಸಮೃದ್ಧಿ ಮತ್ತು ಸಮಾನತೆಗೆ ದಾರಿ ಮಾಡಿಕೊಟ್ಟಿದ್ದಾರೆ.  ಬಾಬಾಸಾಹೇಬ್ ಅವರು ಹಾಕಿಕೊಟ್ಟ ಹಾದಿಯಲ್ಲಿ ಮೋದಿ ಸರ್ಕಾರ ಸಮಾಜದ ಏಳಿಗೆಗಾಗಿ, ದಶಕಗಳಿಂದ ತುಳಿತಕ್ಕೊಳಗಾದವರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.


ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss