Tuesday, June 28, 2022

Latest Posts

ದೇಶಕ್ಕೆ ನಾಲ್ಕು ದಿಕ್ಕಿನಲ್ಲಿ ನಾಲ್ಕು ರಾಜಧಾನಿ ರಚಿಸಿ: ಕೇಂದ್ರ ಸರ್ಕಾರಕ್ಕೆ ದೀದಿ ಆಗ್ರಹ

ಹೊಸದಿಗಂತ ಆನ್ ಲೈನ್ ಡೆಸ್ಕ್:

ನೇತಾಜಿ ಸುಭಾಷ್​ ಚಂದ್ರ ಬೋಸರ 124ನೇ ಜನ್ಮದಿನಾಚರಣೆಯಂದು ಕೇಂದ್ರ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ವಿಶೇಷ ಬೇಡಿಕೆ ಇಟ್ಟಿದ್ದು, ದೇಶಕ್ಕೆ ನಾಲ್ಕು ದಿಕ್ಕಿನಲ್ಲಿ ನಾಲ್ಕು ರಾಜಧಾನಿ ರಚಿಸಿ, ಅಲ್ಲಿಯೂ ಸಂಸತ್​ ಅಧಿವೇಶನಗಳನ್ನು ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ದೆಹಲಿ ಮಾತ್ರ ಏಕೆ ರಾಜಧಾನಿಯಾಗಬೇಕು? ಅಲ್ಲಿ ಮಾತ್ರ ಏಕೆ ಸಂಸತ್​ ರಚನೆಯಾಗಬೇಕು? ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದು, ಎಲ್ಲವೂ ದೆಹಲಿಗೆ ಮಾತ್ರವೇ ಸೀಮಿತವಾಗಿರುವುದಾದರೂ ಏಕೆ? ನಾಲ್ಕು ರಾಷ್ಟ್ರೀಯ ರಾಜಧಾನಿ ರಚಿಸುವ ಕೂಗಿನ ಪರ ಸಂಸತ್‌ನಲ್ಲಿ ಧ್ವನಿ ಎತ್ತುವಂತೆ ನನ್ನ ಸಂಸತ್ ಸದಸ್ಯರಿಗೆ ನಾನು ಮನವಿ ಮಾಡುತ್ತೇನೆ. ನಮ್ಮ ಆಲೋಚನೆಗಳನ್ನು ಬದಲಿಸಬೇಕಿದೆ. ಕೇವಲ ಒಬ್ಬ ನಾಯಕನಿಂದ ಒಂದು ದೇಶವನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss