ನವದೆಹಲಿ: ದೇಶದಲ್ಲಿರುವ ಸಹಕಾರಿ ಬ್ಯಾಂಕುಗಳನ್ನು ಆರ್ಬಿಐ ವ್ಯಾಪ್ತಿಗೆ ಒಳಪಡಿಸುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ.
ಗ್ರಾಹಕರ ಹಿತವನ್ನು ಕಾಪಾಡುವ ಉದ್ದೇಶದಿಂದ ಬ್ಯಾಂಕಿಂಗ್ ನಿಯಂತ್ರಣ ತಿದ್ದುಪಡಿ ಮಸೂದೆ ೨೦೨೦ನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಯೋಚಿಸಿತ್ತು. ಆದರೆ ಕೊರೋನಾದಿಂದ ಅಧಿವೇಶನವನ್ನು ಮುಂದೂಡಿದ್ದರಿಂದ ಮಸೂದೆ ಪಾಸ್ ಆಗಿರಲಿಲ್ಲ. ಹೀಗಾಗಿ ಸಹಕಾರಿ ಬ್ಯಾಂಕುಗಳ ಗ್ರಾಹಕರ ಹಿತ ಕಾಯುವ ದೃಷ್ಟಿಯಿಂದ ಸುಗ್ರೀವಾಜ್ಞೆ ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆದು ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು.
ಇದೀಗ ರಾಷ್ಟ್ರಪತಿಗಳು ಮಸೂದೆಗೆ ಅಂಕಿತ ಹಾಕಿದ್ದಾರೆ. ಈ ಮೂಲಕ ದೇಶದಲ್ಲಿನ ೧,೫೪೦ ಸಹಕಾರಿ ಬ್ಯಾಂಕುಗಳು ಆರ್ ಬಿಐ ವ್ಯಾಪ್ತಿಗೆ ಒಳಪಡಲಿವೆ. ಕೇಂದ್ರ ಸರಕಾರದ ಈ ನಿರ್ಧಾರದಿಂದಾಗಿ ಠೇವಣಿದಾರರ ಹಣ ಸುರಕ್ಷಿತವಾಗಿರಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.