Thursday, August 11, 2022

Latest Posts

ದೇಶದಲ್ಲಿ ಒಂದೇ ದಿನ 1081 ಮಂದಿ ಕೊರೋನಾ ಸೋಂಕಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆಯೇ ಕೊರೋನಾ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ಹೆಚ್ಚುತ್ತಿದೆ. ಗುರುವಾರ 76,489 ಹೊಸ ಕೊರೋನಾ ಪ್ರಕರಣ ದೃಢ ಪಟ್ಟಿದ್ದು, 1081 ಜನ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಗುರುವಾರ 76,489 ಹೊಸ ಕೊರೋನಾ ಪ್ರಕರಣ ದೃಢ ಪಟ್ಟಿದ್ದು, 1081 ಜನ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ ತಿಂಗಳಿನ 27  ದಿನಗಳಲ್ಲಿ 16,86,162 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ ಬಲಿಯಾದವರ ಸಂಖ್ಯೆ 25 ಸಾವಿರ ದಾಟಿದೆ.

ಹಿಂದಿನ ಎರಡು ದಿನಗಳಿಂದ ಸೋಂಕಿತರ ಸಂಖ್ಯೆ ಹೆಚ್ಚಿದ್ದು,  ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 33.8 ಲಕ್ಷ ಆಗಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 61621ಕ್ಕೇರಿದೆ. 25.8 ಲಕ್ಷ ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss