ಹೊಸದಿಲ್ಲಿ: ದೇಶಾದ್ಯಂತ ಲಾಕ್ ಡೌನ್ ನಡುವೆಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,380ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 37 ಮಂದಿ ಬಲಿಯಾಗಿದ್ದು, 941 ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ ದೇಶದಲ್ಲಿ ಸೋಂಕಿತರ ಸಂಖ್ಯೆ 12,380ಕ್ಕೇ ಏರಿಕೆ ಯಾಗಿದೆ. ಒಟ್ಟು ದೇಶದಲ್ಲಿ 1489 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಮೃತಪಟ್ಟವರ ಸಂಖ್ಯೆ 414ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಕೊರೋನಾಗೆ 279 ಮಂದಿ ಸೋಂಕಿತರು ಪತ್ತೆಯಾಗಿದ್ದು, 12ಮಂದಿ ಸಾವನ್ನಪ್ಪಿದ್ದಾರೆ.