Thursday, June 30, 2022

Latest Posts

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 37,975 ಹೊಸ ಪ್ರಕರಣಗಳು ಪತ್ತೆ: ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ ಎಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 37,975 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 480 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 37,975 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 42,314 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 86,04,955ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,38,667 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿವೆ.

ನಿನ್ನೆ ಒಂದೇ ದಿನ ದೇಶಾದ್ಯಂತ 480 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,34,218ಕ್ಕೆ ಏರಿಕೆಯಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss