Tuesday, June 28, 2022

Latest Posts

ಕಿಲ್ಲರ್ ಕೊರೋನಾ ಗೆ 437 ಮಂದಿ ಸಾವು: ದೇಶದಲ್ಲಿ 13 ಸಾವಿರಕ್ಕೆ ಏರಿದ ಸೋಂಕಿತರ ಸಂಖ್ಯೆ

ಹೊಸದಿಲ್ಲಿ: ದೇಶದಲ್ಲಿ ಕಿಲ್ಲರ್ ಕೊರೋನಾ ಗೆ 11201 ಮಂದಿ ಸಕ್ರಿಯ ಪ್ರಕರಣಗಳಿದ್ದರೆ, 1749 ಮಂದಿ ಗುಣಮುಖರಾಗಿದ್ದು,  ಸೋಂಕಿಗೆ 437 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ನಡೆಸಿದೆ.

ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾದಿಂದ ದೇಶದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ದೇಶದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿತರ ಸಂಖ್ಯೆ ಇರುವ ಮಹಾರಾಷ್ಟ್ರ ಇದೀಗ ಮತ್ತೆ 286 ಹೊಸ ಪ್ರಕರಣಗಳನ್ನು ಹುಟ್ಟು ಹಾಕಿದೆ. ಇದರಿಂದ ರಾಜ್ಯದಲ್ಲಿ 3202 ಸೋಂಕಿತರ ಪ್ರಕರಣ ದಾಖಲಾಗಿದೆ. ಸೋಂಕಿಗೆ 194 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದೇಶದಲ್ಲಿ ಕೊರೋನಾ ಪ್ರಕರಣಗಳು ದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ, ತೆಲಂಗಾಣ, ಆಂಧ್ರಪ್ರದೇಶ, ಕೇರಳ ರಾಜ್ಯಗಳಲ್ಲಿ ಹೆಚ್ಚಗಿದ್ದು, ರಾಜ್ಯದ ಪ್ರಮುಖ ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ.

ಇದರಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ 13 ಸಾವಿರ ಗಡಿದಾಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss