Wednesday, July 6, 2022

Latest Posts

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: ನಿನ್ನೆ ಪತ್ತೆಯಾದ ಪ್ರಕರಣಗಳೆಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 15,144 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 15,144 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಒಟ್ಟಾರೆ ಸೋಂಕಿತರ ಸಂಖ್ಯೆ 1,05,57,985ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 17,170 ಕೊರೋನಾ ಸೋಂಕಿತರು ಗುಣಮುಖರಾಗಿದ್ದು,  ಒಟ್ಟು ಗುಣಮುಖರಾದವರ ಸಂಖ್ಯೆ1,01,96,885 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,08,826 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 181 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,52,274 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss