Wednesday, August 17, 2022

Latest Posts

ದೇಶದಲ್ಲಿ 1 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಹೊಸದಿಲ್ಲಿ: ದೇಶದಲ್ಲಿ ಲಾಕ್ ಡೌನ್ 4.0 ಜಾರಿಯಾಗುತ್ತಿದ್ದಂತೆಯೇ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿಗೆ 5 ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣಗಳು ದಾಖಲಾಗಿದ್ದು, 4ನೇ ಹಂತದ ಲಾಕ್ ಡೌನ್ ನಲ್ಲಿ ದೇಶದ್ಯಂತ ಅತೀ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ದೇಶದಲ್ಲಿ ಬಹುತೇಕ ಕೊರೋನಾ ಶಂಕಿತರ ಪರಿಕ್ಷಾ ವರದಿ ಪಾಸಿಟಿವ್ ಬಂದಿದ್ದು, 38ಸಾವಿರ ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ ಸೇರಿದಂತೆ ಪ್ರಮುಖ ರಾಜ್ಯಗಳು ದೇಶದಲ್ಲಿನ ಕೊರೋನಾ ಸೋಂಕಿತರ ಸಂಖ್ಯೆಗೆ ಅಧಿಕ ಪಾಲು ನೀಡಿದೆ.

ಕರ್ನಾಟಕದಲ್ಲಿ ಈಗಾಗಲೇ ಎಲ್ಲಾ ಸಾರಿಗೆ, ಸಲೂನ್, ಆಟೋ, ಕ್ಯಾಬ್ ಸೇರಿದಂತೆ ಎಲ್ಲಾ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1150ಕ್ಕೂ ಅಧಿಕ ಮಂದಿಗೆ ಸೋಂಕಿತರು ಪತ್ತೆಯಾಗಿದ್ದು, 522 ಮಂದಿ ಗುಣಮುಖರಾಗಿದ್ದಾರೆ.  ರಾಜ್ಯದಲ್ಲಿ ಕೊರೋನಾದಿಂದ ಬಲಿಯಾದವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ 35ಸಾವಿರ ಮಂದಿ ಸೋಂಕಿತರಿದ್ದು, 1200ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!