Thursday, July 7, 2022

Latest Posts

ದೇಶದಲ್ಲಿ 14,545 ಹೊಸ ಕೊರೋನಾ ಪ್ರಕರಣಗಳು: ಗುಣಮುಖರಾದವರ ಸಂಖ್ಯೆ ಎಷ್ಟು ಗೊತ್ತಾ?

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಗುರುವಾರ ಒಂದೇ ದಿನ 14,545 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 163 ಮಂದಿ ಬಲಿಯಾಗಿದ್ದಾರೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,25,428ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 1,88,688 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಒಂದೇ ದಿನ 18,002 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,02,83,708ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೋನಾ ಸೋಂಕಿಗೆ ಈಗಾಗಲೇ 1,53,032 ಮಂದಿ ಬಲಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss