Thursday, July 7, 2022

Latest Posts

ದೇಶದಲ್ಲಿ 24  ಗಂಟೆಯಲ್ಲಿ 43,082 ಹೊಸ ಪ್ರಕರಣಗಳು ಪತ್ತೆ: ಸೋಂಕಿಗೆ ಬಲಿಯಾದವರೆಷ್ಟು ಗೊತ್ತಾ?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕಳೆದ 24  ಗಂಟೆಯಲ್ಲಿ 43,082 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 492 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 43,082 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 93,09,788ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 39,379ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 87,18,517ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,55,555 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿವೆ.

ನಿನ್ನೆ ಒಂದೇ ದಿನ ದೇಶಾದ್ಯಂತ 492 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,35,715ಕ್ಕೆ ಏರಿಕೆಯಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss