ಹೊಸ ದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 44,878 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 87,28,795ಕ್ಕೆ ಏರಿಕೆಯಾಗಿ.
ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ಮಾಹಿತಿ ನೀಡಿದ್ದು, ಒಂದೇ ದಿನ 547 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,28,688ಕ್ಕೆ ತಲುಪಿದೆ ನಿನ್ನೆ ಒಂದೇ ದಿನ 49,079 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿ ಒಟ್ಟು ಗುಣಮುಖರ ಸಂಖ್ಯೆ 81,15,580ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಪ್ರಸ್ತುತ 4,84,547 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.