ನವದೆಹಲಿ: ದೇಶದಲ್ಲಿ ಕೊರೋನಾ ಅಟ್ಟಹಾಸ ಕಡಿಮೆ ಆಗುತ್ತಿದ್ದು, 24 ಗಂಟೆಯಲ್ಲಿ 79,476 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 64,73,545ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ಪ್ರಕಾರ ಶನಿವಾರ ಮುಂಜಾನೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಕೊರೋನಾಕ್ಕೆ 1,069 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 1,00,842ಕ್ಕೆ ಏರಿಕೆಯಾಗಿದೆ.
ಇನ್ನು 64,73,545 ಮಂದಿ ಸೋಂಕಿತರ ಪೈಕಿ 54,27,707 ಮಂದಿ ಗುಣಮುಖರಾಗಿದ್ದು, ದೇಶದಲ್ಲಿನ್ನೂ 9,44,996 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
India's #COVID19 related deaths cross 1 lakh mark with 1,069 deaths reported in the last 24 hours.
With 79,476 new cases, the tally reaches 64,73,545 including 9,44,996 active cases, 54,27,707 cured/discharged/migrated cases & 1,00,842 deaths: Union Health Ministry pic.twitter.com/7QvhmAG2RS
— ANI (@ANI) October 3, 2020