Thursday, July 7, 2022

Latest Posts

ದೇಶದಲ್ಲಿ 36 ಸಾವಿರ ಹೊಸ ಕೊರೋನಾ ಪ್ರಕರಣ ಪತ್ತೆ: ಸೋಂಕಿನಿಂದ ಚೇತರಿಸಿಕೊಂಡವರೆಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕಳೆದ 24 ಗಂಟೆಯಲ್ಲಿ 36,011 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 482 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 36,011 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 96,44,222 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 41,970 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 91,00,7925ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶಾದ್ಯಂತ 482 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ  1,40,182ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,03,248 ಸಕ್ರಿಯ ಪ್ರಕರಣಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss