ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿನ 33 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 5 ಸಾವಿರಕ್ಕಿಂತಲೂ ಕಡಿಮೆ ಕೋವಿಡ್ 19 ಸಕ್ರಿಯ ಪ್ರಕರಣಗಳಿದ್ದು,ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮಾತ್ರ 35 ಸಾವಿರಕ್ಕಿಂತಲೂ ಹೆಚ್ಚಿನ ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ , ದೇಶದಲ್ಲಿನ ಒಟ್ಟಾರೇ ಕೋವಿಡ್-19 ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪಾಲು ಕೇವಲ ಶೇ.3.12 ರಷ್ಟಿದೆ ಎಂದರು.
ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮಾತ್ರ 35 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಕೇಸ್ ಗಳಲ್ಲಿ ಈ ಎರಡು ರಾಜ್ಯಗಳ ಪಾಲು ಶೇ.71 ರಷ್ಟಿದೆ. ಪ್ರಸ್ತುತ 33 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 5 ಸಾವಿರಕ್ಕಿಂತಲೂ ಕಡಿಮೆ ಕೋವಿಡ್ -19 ಸಕ್ರಿಯ ಪ್ರಕರಣಗಳಿವೆ ಎಂದು ಭೂಷಣ್ ಹೇಳಿದರು.
ಕಳೆದ 24 ಗಂಟೆಗಳ ಅವಧಿಯಲ್ಲಿ 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವುದೇ ಸಾವು ಪ್ರಕರಣಗಳು ವರದಿಯಾಗಿಲ್ಲ. ಕಳೆದ ಮೂರು ವಾರುಗಳಲ್ಲಿ ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವುದೇ ಸಾವು ಪ್ರಕರಣಗಳು ವರದಿಯಾಗಿಲ್ಲ ಎಂದು ಅವರು ತಿಳಿಸಿದರು.
ಇಲ್ಲಿಯವರೆಗೂ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಸೇರಿದಂತೆ 63,10,194 ಫಲಾನುಭವಿಗಳು ಕೋವಿಡ್-19 ಲಸಿಕೆ ಪಡೆದುಕೊಂಡಿದ್ದಾರೆ. ಫೆ . 13ರಿಂದ ಎರಡನೇ ಹಂತದ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ. ಫೆಬ್ರವರಿ 20ರೊಳಗೆ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಒಂದು ಬಾರಿ ಲಸಿಕೆ ಹಾಕಿಸುವಂತೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಲಾಗಿದೆ ಎಂದು ರಾಜೇಶ್ ಭೂಷಣ್ ಹೇಳಿದರು.