ಹೊಸದಿಲ್ಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 38,310 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಈಗ 82,67,623 ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ನೀಡಿದೆ.
ಈವರೆಗೂ ಭಾರತದಲ್ಲಿ 5,41,405 ಸಕ್ರಿಯ ಪ್ರಕರಣಗಳಿದ್ದು ಚಿಕಿತ್ಸೆ ಪಡೆಯುತ್ತಿದ್ದು, 76,03,121 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದ ಕೊರೋನಾ ಸೋಂಕಿತರಲ್ಲಿ ಶೇ.6.83 ಮಂದಿ ಸಕ್ರಿಯ ಸೋಂಕಿತರಿದ್ದು, ಶೇ.91.68ರಷ್ಟು ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.