ದೇಶದಲ್ಲಿ 6868 ಮಂದಿ ಸೋಂಕಿತರು ಗುಣಮುಖ: 934 ಮಂದಿ ಬಲಿ

0
55
  1. ಹೊಸದಿಲ್ಲಿ: ದೇಶದಲ್ಲಿ ಮಹಾಮಾರಿ ಕೊರೋನಾಗೆ ಕಳೆದ 24 ಗಂಟೆಗಳಲ್ಲಿ 1543 ಪ್ರಕರಣಗಳು ದಾಖಲಾಗಿದ್ದು, ಒಟ್ಟು 29,435 ಮಂದಿಗೆ ಸೋಂಕು ದೃಢಪಟ್ಟಿದೆ.

ಒಂದೇ ದಿನದಲ್ಲಿ 62 ಮಂದಿ ಬಲಿಯಾಗಿದ್ದು, ಈವರೆಗೆ ದೇಶದಲ್ಲಿ ಕೊರೋನಾ ಸೋಂಕಿನಿಂತ ಮೃತಪಟ್ಟವರ ಸಂಖ್ಯೆ 934ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಒಟ್ಟು 29,435 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಅವರಲ್ಲಿ 21,631 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಈಗಾಗಲೇ ದೇಶದಲ್ಲಿ 6868 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರ ಒಂದರಲ್ಲೇ ಕೊರೋನಾ ಸೋಂಕಿನಿಂದ ಈವರೆಗು 342 ಮಂದಿ ಬಲಿಯಾಗಿದ್ದು, 8ಸಾವಿರಕ್ಕೂ ಅಧಿಕ ಮಂದಿ ಸೋಂಕಿತರು ದಾಖಲಾಗಿದ್ದಾರೆ. ಗುಜರಾತ್ ನಲ್ಲಿ 3500ಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದಾರೆ.

 

LEAVE A REPLY

Please enter your comment!
Please enter your name here