ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೇಶದಲ್ಲಿ 7ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ: ಒಂದೇ ದಿನ 22,252 ಸೋಂಕಿತರು

ಹೊಸದಿಲ್ಲಿ: ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 22,252 ಮಂದಿಗೆ ಸೋಂಕು ತಗುಲಿದ್ದು, ಒಟ್ಟಾರೆ ಇದೀಗ ದೇಶದಲ್ಲಿ 7 ಲಕ್ಷ ಗಡಿದಾಟಿದೆ.

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿತ ಸಂಖ್ಯೆ 22,252 ಆಗಿದ್ದು, ದೇಶದಲ್ಲಿ 7,19,665 ಮಂದಿ ಸೋಂಕಿತರು ದಾಖಲಾಗಿದ್ದು, ಇವರಲ್ಲಿ 2,59,557 ಮಂದಿ ಸಕ್ರಿಯ ಸೋಂಕಿತರಿದ್ದಾರೆ.

ದೇಶದಲ್ಲಿ ಒಟ್ಟಾರೆ 4,39,948 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಂದೇ ದಿನ 467 ಮಂದಿ ಸಾವನ್ನಪ್ಪಿದ್ದು, ಒಟ್ಟಾರೆ ಸೋಂಕಿನಿಂದ 20,190 ಮಂದಿ ಬಲಿಯಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 2,11,987ಗೆ ಏರಿಕೆಯಾಗಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ 1,00,823 ಮಂದಿ ಸೋಂಕಿತರಾಗಿದ್ದು, ಕಳೆದ 24 ಗಂಟೆಗಳಲ್ಲಿ 1,379 ಪ್ರಕರಣಗಳು ವರದಿಯಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss