ಹೊಸ ದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 44,376ಹೊಸ ಪ್ರಕರಣಗಳು ಪತ್ತೆಯಾಗಿದ್ದು, 481 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 44,376 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 92,22,217ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 37,816 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 86,42,771ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,44,746 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿವೆ.
ನಿನ್ನೆ ಒಂದೇ ದಿನ ದೇಶಾದ್ಯಂತ 481 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,34,699ಕ್ಕೆ ಏರಿಕೆಯಾಗಿದೆ.