ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಶನಿವಾರ 12,059 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆ 78 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 1,08,26,363ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಪೈಕಿ 1,48,766 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ದೇಶದಲ್ಲಿ 11,805 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈ ಮೂಲಕ ದೇಶದಲ್ಲಿ ಗುಣಮುಖರಾದವರ ಸಂಖ್ಯೆ 1,05,22,601ಕ್ಕೆ ಏರಿಕೆಯಾಗಿದೆ.