Thursday, June 30, 2022

Latest Posts

ದೇಶದೆಲ್ಲೆಡೆ ಕೊರೋನಾ ವೈರಸ್ ಅಟ್ಟಹಾಸ: ಜುಲೈ 15ರವರೆಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ನಿರ್ಬಂಧ!

ನವದೆಹಲಿ: ದೇಶದೆಲ್ಲೆಡೆ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಸ್ಥಗಿತಗೊಂಡಿದ್ದ ಅಂತಾರಾಷ್ಟ್ರೀಯ ವಿಮಾನ ಸೇವೆಯು ಜುಲೈ ೧೫ರವರೆಗೆ ತನ್ನ ನಿರ್ಬಂಧವನ್ನು ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ತಿಳಿಸಿದೆ.
ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.
ಮಾರ್ಚ್ ೨೫ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.
ಆದರೆ, ಸದ್ಯ ದೇಶಿಯ ವಿಮಾನ ಹಾರಾಟ ಆರಂಭವಾಗಿದ್ದು, ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss