ಹೊಸದಿಗಂತ ಆನ್ಲೈನ್ ಡೆಸ್ಕ್:
ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಸಂಭ್ರಮ ಮುಗಿಲುಮುಟ್ಟಿದೆ.
ಇನ್ನು ಕೆಲವೇ ಕ್ಷಣಗಳಲ್ಲಿ ಜೋ ಬೈಡನ್ ೪೬ನೇ ಅಧ್ಯಕ್ಷರಾಗಿ, ಕಮಲಾ ಹ್ಯಾರಿಸ್ 49ನೇ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿವೆ.
ಈ ಸಮಾರಂಭಕ್ಕಾಗಿ ಕ್ಯಾಪಿಟಲ್ ಭವನ ಅಲಂಕಾರಗೊಂಡು ಕಂಗೊಳಿಸುತ್ತಿದ್ದು, ಕೊರೊನಾ ಕಾರಣದಿಂದಾಗಿ ಕಾರ್ಯಕ್ರಮ ಕೇವಲ ಒಂದು ಸಾವಿರ ಮಂದಿಯ ಉಪಸ್ಥಿತಿಯಲ್ಲಿ ಸರಳವಾಗಿ ನಡೆಯಲಿದೆ.
ಭಾರತೀಯ ಕಾಲಮಾನ ಬುಧವಾರ ರಾತ್ರಿ 8.30ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದೆ. ಸಾಮಾಜಿಕ ಮಾಧ್ಯಮ, ಟಿವಿ ಚಾನೆಲ್ಗಳಲ್ಲಿ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ. ರಾತ್ರಿ 10 ಗಂಟೆಗೆ ಅಮೆರಿಕಾ ರಾಷ್ಟ್ರಗೀತೆಯೊಂದಿಗೆ ಪ್ರಮಾಣವಚನ ಸಮಾರಂಭ ಆರಂಭವಾಗಲಿದ್ದು,https://
ಕ್ಯಾಪಿಟಲ್ ಹಿಲ್ ಭವನದ ಮೆಟ್ಟಿಲುಗಳ ಮೇಲೆ ನಿರ್ಮಿಸಿರುವ ವೇದಿಕೆಯಲ್ಲಿ ಅಧ್ಯಕ್ಷ ಜೋ ಬೈಡನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೋನಿಯಾ ಸೋಟೊಮೇಯರ್ ಪ್ರಮಾಣವಚನ ಬೋಧಿಸಲಿದ್ದಾರೆ. ನಂತರ ಅಧ್ಯಕ್ಷ ಬೈಡೆನ್ ನಂತರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೈಡೆನ್ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಪ್ರಮಾಣವಚನ ಬೋಧಿಸಲಿದ್ದಾರೆ. ಈ ಸಂದರ್ಭದಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ೧೨೭ ವರ್ಷಗಳ ಹಳೆಯ ಬೈಬಲ್ ಮೇಲೆ ಪ್ರಮಾಣ ಸ್ವೀಕರಿಸಲಿದ್ದಾರೆ.