ಮಡಿಕೇರಿ: ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದ್ದು, ಕೊಡಗು ಜಿಲ್ಲೆ ಈ ಬಾರಿ ದ್ವಿತೀಯ ಸ್ಥಾನಕ್ಕೆ ಜಿಗಿದಿದೆ.
ಶೇ.90.71 ಫಲಿತಾಂಶ ಪಡೆದಿರುವ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನವನ್ನು ಹಂಚಿಕೊಂಡಿದ್ದು, ಶೇ. 81.53 ಫಲಿತಾಂಶವನ್ನು ಪಡೆದಿರುವ ಕೊಡಗು ದ್ವಿತೀಯ ಸ್ಥಾನಕ್ಕೇರಿದೆ.
ಕಳೆದ ಬಾರಿ ಕೊಡಗು ಜಿಲ್ಲೆಗೆ 83.31 ಫಲಿತಾಂಶ ದೊರಕಿದ್ದು, ತೃತೀಯ ಸ್ಥಾನ ಪಡೆದಿತ್ತು. ಪ್ರತಿ ಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.