Sunday, August 14, 2022

Latest Posts

ದ್ವಿತೀಯ ಪಿಯು ಪರೀಕ್ಷೆಗೆ ಸಿದ್ದತೆ : ಯಾದಗಿರಿ ಜಿಲ್ಲೆಯಲ್ಲಿ 13 ಕೇಂದ್ರ, 6457 ವಿದ್ಯಾರ್ಥಿಗಳು

ಯಾದಗಿರಿ: ಜಿಲ್ಲೆಯಲ್ಲಿ ಗುರುವಾರದಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲಿಷ ಪರೀಕ್ಷೆಗಾಗಿ ಜಿಲ್ಲೆಯಲ್ಲಿ 13 ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 6457 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾoತ ಹಳ್ಳಿ ತಿಳಿಸಿದ್ದಾರೆ.
ಈಗಾಗಲೇ ಎಲ್ಲಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಮಾಡಲಾಗಿದ್ದು, ಮಕ್ಕಳಿಗಾಗಿ ಮಾಸ್ಕ ಖರೀದಿಸಲಾಗಿದೆ. ಅಲ್ಲದೆ ಪರೀಕ್ಷೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಎರಡು ತಾಸು ಮುಂಚಿತವಾಗಿ ಕೇಂದ್ರಕ್ಕೆ ಬರಲು ಸೂಚಿಸಲಾಗಿದೆ. ಎಲ್ಲಾ ಮಕ್ಕಳನ್ನು ಥರ್ಮಲ ಸ್ಕ್ರೀನಿಂಗ್ ಒಳಪಡಿಸಲಾಗುವುದು. ಈ ಕಾರ್ಯಕ್ಕೆ ಆರೋಗ್ಯ ಇಲಾಖೆ ಸಿಬ್ಬಂಧಿಗಳು ಕೈಜೋಡಿಸಿಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ ಮಕ್ಕಳ ಜೊತೆಗೆ ಹೊರ ಜಿಲ್ಲೆಯ 549 ಮಕ್ಕಳು ಸಹ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ನಕಲು ನಡೆಯದಂತೆ ಸಿಸಿ ಕ್ಯಾಮಾರ ಅಳವಡಿಸಲಾಗಿದೆ. ಜಿಲ್ಲಾಡಳಿತದ ಮಾರ್ಗಸೂಚಿಯ ಪ್ರಕಾರ ಎಲ್ಲಾ ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಸಿಲಾಗಿದೆ. ಯಾವುದೆ ಮಕ್ಕಳಲ್ಲಿ ಹಾಗೂ ಪಾಲಕರಲ್ಲಿ ಆತಂಕ ಬೇಡ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss