Wednesday, August 10, 2022

Latest Posts

ದ್ವಿತೀಯ ಪಿಯು ಪರೀಕ್ಷೆ: ಚಿಕ್ಕೋಡಿಯಲ್ಲಿ ಒಟ್ಟು 45 ಪರೀಕ್ಷಾ ಕೇಂದ್ರಗಳಲ್ಲಿ 26,559 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ

ಬೆಳಗಾವಿ: ಜೂನ್ 18ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ ಪರೀಕ್ಷೆಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 45 ಪರೀಕ್ಷಾ ಕೇಂದ್ರಗಳಲ್ಲಿ 26,559 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, 45 ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ಆರೋಗ್ಯ ಇಲಾಖೆಯ ಮಾನದಂಡಗಳ ಪ್ರಕಾರ ಸ್ಥಳೀಯ ಆಡಳಿತದ ಸಹಕಾರದೊಂದಿಗೆ ಶುಚಿಗೊಳಿಸಲಾಗಿದೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಕರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು,  ಹೊರ ಜಿಲ್ಲೆಯಿಂದ 829 ವಿದ್ಯಾರ್ಥಿಗಳು ಮತ್ತು ಹೊರ ರಾಜ್ಯದಿಂದ 29 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅವರಿಗೆ ಪಾಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷೆ ಕೇಂದ್ರಗಳ ಕೊಠಡಿಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಾಮಾಜಿಕ ಅಂತರ ಕಾಯ್ದುಕೊಂಡು ಆಸನ ವ್ಯವಸ್ಥೆಯನ್ನು ಮಾಡಲಾಗಿದೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 45 ಪರೀಕ್ಷಾ ಕೇಂದ್ರಗಳ ಜೊತೆ 4 ಬ್ಲಾಕ್ (ಉಪ ಕೇಂದ್ರ) ಗಳನ್ನು ಮಾಡಲಾಗಿದೆ. ಈ ಮೊದಲು ಒಟ್ಟು 886 ಕೊಠಡಿಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ 1135 ಕೊಠಡಿಗಳಲ್ಲಿ ಆಸನ ವ್ಯವಸ್ಥೆಯನ್ನು ಮಾಡಲಾಗಿದ್ದು, ಒಟ್ಟು 249 ಕೊಠಡಿಗಳ ಸಂಖ್ಯೆ ಹೆಚ್ಚಾಗಿವೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬರಲು ಬಸ್ ಸಂಚಾರ ವ್ಯವಸ್ಥೆಯನ್ನು ಮಾಡಲು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಇಲಾಖೆಯಿಂದ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲು ಥರ್ಮಲ್ ಸ್ಕ್ಯಾನರ್, ಮಾಸ್ಕ್ ವ್ಯವಸ್ಥೆ ಮಾಡಲಾಗಿದೆ. ಹೊರ ಬೇರೆ ಜಿಲ್ಲೆಯಿಂದ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಕೋರಿಕೆ ಸಲ್ಲಿಸಿದ್ದ ವಿದ್ಯಾರ್ಥಿಗಳಿಗೆ ನಮ್ಮ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಅವರ ಮೂಲ ಜಿಲ್ಲೆಯಲ್ಲಿಯ ಈ ಮೊದಲು ಬರೆದ ಪರೀಕ್ಷಾ ಕೇಂದ್ರಗಳಲ್ಲಿ ಎರಡೂ ಕಡೆಗಳಲ್ಲಿ ಆಸನ ವ್ಯವಸ್ಥೆಯನ್ನು ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ತಮಗೆ ಅನುಕೂಲವಾಗುವ ಯಾವುದಾದರು ಒಂದು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬಹುದಾಗಿದೆ.
ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಬರೆಯಲು ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಂಡ್ಡು, ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗೆ 9945385983, 8951458846, 8197180193, 9741581136 ಹಾಗೂ 8861915711ಗೆ ವಿದ್ಯಾರ್ಥಿಗಳು ಕರೆ ಮಾಡಬೇಕು ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss