ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿಯವರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳಿಗೆ ವರ್ಕ್ ಫ್ರಂ ಹೋಂ ವಿಧಿಸಲಾಗಿದೆ. ಅಲ್ಲದೆ ಜಿಲ್ಲಾಧಿಕಾರಿಯವರು ಸ್ವತಃ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಜಿಲ್ಲಾಡಳಿತವನ್ನು ಸ್ಯಾನಿಟೈಸೇಷನ್ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ವರ್ಕ್ ಫ್ರಂ ಹೋಂಗೆ ಒಳಗಾಗಿದ್ದಾರೆ.
ಕೊರೋನಾ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಜನತೆಯನ್ನು ಇನ್ನಿಲ್ಲದೆ ಕಾಡುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಯಾರೊಬ್ಬರನ್ನೂ ಬಿಡದೆ ಕೊರೋನಾ ಕಾಟ ಕೊಡುತ್ತಿದೆ.