ದ.ಕ. ಕೊರೋನಾ: ಬುಧವಾರ ದೊರೆತ 7 ಮಂದಿಯ ಗಂಟಲ ದ್ರವದ ಪರೀಕ್ಷಾ ವರದಿ ನೆಗೆಟಿವ್

0
68

ಮಂಗಳೂರು: ಕೊರೋನಾ ಸಂಬಂಧಿಸಿ ಬುಧವಾರ ದೊರೆತ ೭ ಮಂದಿಯ ಗಂಟಲ ದ್ರವದ ಪರೀಕ್ಷಾ ವರದಿಯಲ್ಲಿ ಎಲ್ಲವೂ ನೆಗೆಟಿವ್ ಆಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ.
ಬುಧವಾರ ಹೊಸದಾಗಿ ೯ ಮಂದಿಯ ಗಂಟಲ ದ್ರವದ ಮಾದರಿಯನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಪಡೆದುಕೊಳ್ಳಲಾಗಿದೆ. ೧೫ ಮಂದಿಯನ್ನು ಅಬ್ಸರ್ವೇಶನ್‌ಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬುಧವಾರ ೨೦ ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದ್ದು, ಇದುವರೆಗೆ ಒಟ್ಟು ೩೮೭೦೧ ಮಂದಿಯನ್ನು ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ೩೬೩೫ ಮಂದಿ ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆ. ಮಂಗಳೂರಿನ ಇಎಸ್‌ಐ ಆಸ್ಪತ್ರೆಯಲ್ಲಿ ೧೧ ಮಂದಿಯನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಒಟ್ಟು ೨೩೧೧ಮಂದಿ ೨೮ ದಿನಗಳ ಹೋಂ ಕ್ವಾರಂಟೈನ್ ಅವಧಿಯನ್ನು ಬುಧವಾರ ಪೂರೈಸಿದ್ದು, ಅವರಲ್ಲಿ ಕೊರೋನಾದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಇದುವರೆಗೆ ೩೪೮ ಮಂದಿಯ ಗಂಟಲ ದ್ರವದ ಮಾದರಿಯ ಪರೀಕ್ಷಾ ವರದಿ ಬಂದಿದ್ದು, ಈ ಪೈಕಿ ೯ ಪಾಸಿಟಿವ್, ೮ ಆಕ್ಟಿವ್, ೩೩೬ ನೆಗೆಟಿವ್ ಆಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here