ಮಂಗಳೂರು: ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಕೊರೋನಾ ಸೋಂಕಿತರಾಗಿ ಅವರು ಜು.2 ರಂದು ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಸಂದರ್ಭದಲ್ಲಿ ಎರಡು ಬಾರಿ ಅವರ ಸ್ವ್ಯಾಬ್ ಟೆಸ್ಟ್ ಮಾಡಿದ ಸಂದರ್ಭದಲ್ಲಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ